2 ಸಮುಯೇಲ 3:18 - ಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ದಾವೀದನ ವಿಷಯವಾಗಿ ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವನೆಂದು ನುಡಿದಿದ್ದಾನಲ್ಲಾ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ದಾವೀದನ ವಿಷಯವಾಗಿ - ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವೆನೆಂದು ನುಡಿದಿದ್ದಾನಲ್ಲಾ ಎಂದು ಹೇಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅದನ್ನು ಈಗಲೇ ಮಾಡಿರಿ! ಯೆಹೋವನು ದಾವೀದನ ಬಗ್ಗೆ ಮಾತಾಡುತ್ತಾ, ‘ನನ್ನ ಜನರಾದ ಇಸ್ರೇಲರನ್ನು ಫಿಲಿಷ್ಟಿಯರಿಂದಲೂ ಬೇರೆಲ್ಲಾ ಶತ್ರುಗಳಿಂದಲೂ ನನ್ನ ಸೇವಕನಾದ ದಾವೀದನ ಮೂಲಕ ಸಂರಕ್ಷಿಸುತ್ತೇನೆ’” ಎಂದು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.