Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:24 - ಕನ್ನಡ ಸತ್ಯವೇದವು C.L. Bible (BSI)

24 ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ. ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅರಸನ ಬಳಿಗೆ ಹೋಗಿ - ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದಿದ್ದನಂತೆ; ನೀನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯೋವಾಬನು ರಾಜನ ಬಳಿಗೆ ಬಂದು, “ನೀನು ಮಾಡಿದ್ದೇನು? ಅಬ್ನೇರನು ನಿನ್ನ ಬಳಿಗೆ ಬಂದರೂ ಅವನನ್ನು ದಂಡಿಸದೆ ಯಾಕೆ ಕಳುಹಿಸಿಬಿಟ್ಟೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:24
8 ತಿಳಿವುಗಳ ಹೋಲಿಕೆ  

ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.


ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.


ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?


ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು.


ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು, ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ತಿಳಿದುಕೊಂಡನು.


ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.


ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು