Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:28 - ಕನ್ನಡ ಸತ್ಯವೇದವು C.L. Bible (BSI)

28 ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತುಸು ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಗೆ ಮುಟ್ಟಿತು. ಆಗ ಅವನು - ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ತರುವಾಯ ದಾವೀದನಿಗೆ ಸುದ್ದಿಯು ತಿಳಿಯಿತು. ದಾವೀದನು, “ನನ್ನ ರಾಜ್ಯವಾಗಲಿ ನಾನಾಗಲಿ ನೇರನ ಮಗನಾದ ಅಬ್ನೇರನ ಸಾವಿಗೆ ಕಾರಣರಲ್ಲ. ಯೆಹೋವನಿಗೆ ಇದು ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:28
10 ತಿಳಿವುಗಳ ಹೋಲಿಕೆ  

“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.


“ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.


"ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು