2 ಸಮುಯೇಲ 3:35 - ಕನ್ನಡ ಸತ್ಯವೇದವು C.L. Bible (BSI)35 ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು - ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಅಂದು ಹೊತ್ತು ಇಳಿಯುವ ಮೊದಲೇ ಜನರು ದಾವೀದನಿಗೆ ಊಟ ಮಾಡುವಂತೆ ಒತ್ತಾಯಿಸಿದರು. ಆದರೆ ದಾವೀದನು, “ಸೂರ್ಯನು ಮುಳುಗುವುದಕ್ಕೆ ಮುಂಚಿತವಾಗಿ ನಾನು ರೊಟ್ಟಿಯನ್ನಾಗಲಿ ಇತರ ಆಹಾರವನ್ನಾಗಲಿ ತಿಂದರೆ, ದೇವರು ನನ್ನನ್ನು ದಂಡಿಸಲಿ ಅಥವಾ ನನಗೆ ಕೇಡು ಬರಮಾಡಲಿ” ಎಂದು ಪ್ರತಿಜ್ಞೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿ |