Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:36 - ಕನ್ನಡ ಸತ್ಯವೇದವು C.L. Bible (BSI)

36 ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಜನರು ಇದನ್ನು ಕಂಡು ಮೆಚ್ಚಿದರು. ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಕೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಇದನ್ನು ಕೇಳಿದ ಜನರೆಲ್ಲರೂ ರಾಜನಾದ ದಾವೀದನ ಈ ಕಾರ್ಯವನ್ನು ಮೆಚ್ಚಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:36
7 ತಿಳಿವುಗಳ ಹೋಲಿಕೆ  

ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.


ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II


ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.


ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.


ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು