Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:37 - ಕನ್ನಡ ಸತ್ಯವೇದವು C.L. Bible (BSI)

37 ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೇರನ ಮಗನಾದ ಅಬ್ನೇರನ ಕೊಲೆಯಲ್ಲಿ ಅರಸನು ಕೈಹಾಕಲಿಲ್ಲವೆಂಬುದು ಅವನ ಎಲ್ಲಾ ಜನರಿಗೂ ಇಸ್ರಾಯೇಲರಿಗೂ ಅದೇ ದಿನ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನು ಕೈಹಾಕಲಿಲ್ಲವೆಂಬದು ಅವನ ಎಲ್ಲಾ ಜನರಿಗೂ ಇಸ್ರಾಯೇಲ್ಯರಿಗೂ ಅದೇ ದಿವಸ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೇರನ ಮಗನಾದ ಅಬ್ನೇರನನ್ನು ಕೊಲ್ಲಲು ರಾಜನಾದ ದಾವೀದನು ಆಜ್ಞಾಪಿಸಿರಲಿಲ್ಲವೆಂದು ಯೆಹೂದ್ಯರು ಮತ್ತು ಇಸ್ರೇಲಿನ ಜನರೆಲ್ಲರೂ ಅಂದು ಅರ್ಥಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:37
6 ತಿಳಿವುಗಳ ಹೋಲಿಕೆ  

ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿ; ನೇರನು ಸೌಲನ ಚಿಕ್ಕಪ್ಪನು.


ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.


ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.


ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.


ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು