Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:9 - ಕನ್ನಡ ಸತ್ಯವೇದವು C.L. Bible (BSI)

9 ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 ಯೆಹೋವನು ಹೇಳಿರುವ ಸಂಗತಿಗಳು ನಿಜವಾಗಿಯೂ ಸಂಭವಿಸುತ್ತವೆ ಎಂದು ನಾನು ಪ್ರಮಾಣ ಮಾಡುತ್ತೇನೆ. ಸೌಲನ ವಂಶದವರಿಂದ ರಾಜ್ಯಾಧಿಕಾರವನ್ನು ಕಿತ್ತುಕೊಂಡು ದಾವೀದನಿಗೆ ಕೊಡುವುದಾಗಿ ಯೆಹೋವನು ಹೇಳಿದ್ದಾನೆ. ಯೆಹೋವನು ಇಸ್ರೇಲಿಗೂ ಯೆಹೂದಕ್ಕೂ ದಾವೀದನನ್ನು ರಾಜನನ್ನಾಗಿ ಮಾಡುತ್ತಾನೆ. ಅವನು ದಾನಿನಿಂದ ಬೇರ್ಷೆಬದವರೆಗೆ ಆಳುತ್ತಾನೆ. ಈ ಸಂಗತಿಗಳು ನೆರವೇರುವುದಕ್ಕೆ ನಾನು ಸಹಾಯ ಮಾಡದಿದ್ದರೆ ದೇವರು ನನಗೆ ಕೆಟ್ಟದ್ದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:9
16 ತಿಳಿವುಗಳ ಹೋಲಿಕೆ  

ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.


ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ:


ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.


ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.


ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.


ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.


ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.


ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.


ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು