Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:10 - ಕನ್ನಡ ಸತ್ಯವೇದವು C.L. Bible (BSI)

10 ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಸೇನಾಧೀಶ್ವರನಾದ ಯೆಹೋವದೇವರು ಅವನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಹೊಂದುತ್ತಾ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸರ್ವಶಕ್ತನಾದ ಯೆಹೋವನು ದಾವೀದನೊಂದಿಗೆ ಇದ್ದುದರಿಂದ ಅವನು ಬಲಶಾಲಿಯಾಗುತ್ತಲೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:10
19 ತಿಳಿವುಗಳ ಹೋಲಿಕೆ  

ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.


ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.


ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.


ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.


ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು