Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:13 - ಕನ್ನಡ ಸತ್ಯವೇದವು C.L. Bible (BSI)

13 ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:13
11 ತಿಳಿವುಗಳ ಹೋಲಿಕೆ  

ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು.


ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ದಾವೀದನು ಜೆಸ್ರೀಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಈಗ ಅಬೀಗೈಲಳೂ ಅವನ ಹೆಂಡತಿಯಾದಳು.


ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.


ದಾವೀದನು ಹೆಬ್ರೋನಿನಲ್ಲಿದ್ದಾಗ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು ಇವು: ಅಮ್ನೋನ - ಜೆಸ್ರೀಲಿನ ಅಹೀನೋಮ ಇವನ ತಾಯಿ. ದಾನಿಯೇಲ - ಕರ್ಮೇಲಿನ ಆಬೀಗೈಲಳು ಇವನ ತಾಯಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು