Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:18 - ಕನ್ನಡ ಸತ್ಯವೇದವು C.L. Bible (BSI)

18 ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡಿದ್ದಾರೆಂದು ತಿಳಿದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಫಿಲಿಷ್ಟಿಯರು ಬಂದು ರೆಫಾಯೀಮ್ ಕಣಿವೆಯಲ್ಲಿ ಪಾಳೆಯವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:18
8 ತಿಳಿವುಗಳ ಹೋಲಿಕೆ  

ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.


ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.


ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.


ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು