2 ಸಮುಯೇಲ 5:2 - ಕನ್ನಡ ಸತ್ಯವೇದವು C.L. Bible (BSI)2 ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.