Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:20 - ಕನ್ನಡ ಸತ್ಯವೇದವು C.L. Bible (BSI)

20 ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹೋಗಿ ಅವರನ್ನು ಸೋಲಿಸಿ ಯೆಹೋವನು ಕಟ್ಟೆಯೊಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆಂದು ಹೇಳಿ ಆ ಯುದ್ಧಸ್ಥಳಕ್ಕೆ ಬಾಳ್‍ಪೆರಾಚೀಮೆಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆಗ ದಾವೀದನು ಬಾಳ್‌ಪೆರಾಚೀಮ್‌ಗೆ ಬಂದನು. ಅಲ್ಲಿ ಅವನು ಫಿಲಿಷ್ಟಿಯರನ್ನು ಸೋಲಿಸಿದನು. ದಾವೀದನು, “ಕಟ್ಟೆಯೊಡೆದ ಪ್ರವಾಹವು ನುಗ್ಗಿ ನಾಶಮಾಡುವಂತೆ ಯೆಹೋವನು ನನ್ನ ಶತ್ರುಗಳನ್ನು ನನ್ನ ಎದುರಿನಲ್ಲೇ ನಾಶಪಡಿಸಿದನು” ಎಂದನು. ಆದ್ದರಿಂದ ಅವನು ಆ ಸ್ಥಳಕ್ಕೆ “ಬಾಳ್‌ಪೆರಾಚೀಮ್” ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:20
5 ತಿಳಿವುಗಳ ಹೋಲಿಕೆ  

ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ಹೀಗೆ ದಾವೀದ ಬಾಳ್ ಪೆರಾಚೀಮ್ ಎಂಬಲ್ಲಿ ಅವರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನುಗ್ಗಿ, ವೈರಿಸೈನ್ಯವನ್ನು ನಾಶಮಾಡಲು ಸರ್ವೇಶ್ವರ ನನ್ನನ್ನು ಉಪಯೋಗಿಸಿದ್ದಾರೆ,” ಎಂದು ಹೇಳಿದನು. ಈ ಕಾರಣ ಆ ಸ್ಥಳಕ್ಕೆ ‘ಬಾಳ್ ಪೆರಾಚೀಮ್’ ಎಂಬ ಹೆಸರು ಬಂದಿತು.


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು