Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:22 - ಕನ್ನಡ ಸತ್ಯವೇದವು C.L. Bible (BSI)

22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಫಿಲಿಷ್ಟಿಯರು ಮತ್ತೆ ರೆಫಾಯೀಮ್ ಕಣಿವೆಗೆ ಬಂದು ಪಾಳೆಯವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:22
7 ತಿಳಿವುಗಳ ಹೋಲಿಕೆ  

ಸ್ವಲ್ಪವೇ ಸಮಯದ ನಂತರ ಫಿಲಿಷ್ಟಿಯರು ಪುನಃ ಬಂದು ಕಣಿವೆಯಲ್ಲಿ ಕೊಳ್ಳೆ ಹೊಡೆಯಲು ಪ್ರಾರಂಭಿಸಿದರು.


ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.


ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.


ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.


ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.


ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.


ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು