Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:23 - ಕನ್ನಡ ಸತ್ಯವೇದವು C.L. Bible (BSI)

23 ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಈ ಸಮಯದಲ್ಲಿ ಯೆಹೋವನು ದಾವೀದನಿಗೆ, “ಅಲ್ಲಿಗೆ ಹೋಗಬೇಡ. ಅವರ ಸೈನ್ಯವನ್ನು ಸುತ್ತಿಕೊಂಡು ಹಿಂದಿನಿಂದ ಅವರನ್ನು ಸಮೀಪಿಸು. ಬಾಲ್ಯಾಮ್ ಮರಗಳಿರುವ ಮತ್ತೊಂದು ಕಡೆಯಿಂದ ಅವರ ಮೇಲೆ ಆಕ್ರಮಣ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:23
10 ತಿಳಿವುಗಳ ಹೋಲಿಕೆ  

ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು.


ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.


ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.


ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.


ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು