2 ಸಮುಯೇಲ 5:3 - ಕನ್ನಡ ಸತ್ಯವೇದವು C.L. Bible (BSI)3 ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು. ಅಧ್ಯಾಯವನ್ನು ನೋಡಿ |