Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:6 - ಕನ್ನಡ ಸತ್ಯವೇದವು C.L. Bible (BSI)

6 ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ದಾವೀದನು ತನ್ನ ಜನರನ್ನು ಕರಕೊಂಡು ಯೆರೂಸಲೇವಿುನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರಲಾರನೆಂದು ನೆನಸಿ ದಾವೀದನಿಗೆ - ನೀನು ಒಳಗೆ ಬರಲಾರಿ; ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ಯೆಬೂಸಿಯರಿಗೆ ವಿರುದ್ಧವಾಗಿ ಜೆರುಸಲೇಮಿಗೆ ತನ್ನ ಜನರೊಂದಿಗೆ ಹೋದನು. (ಯೆಬೂಸಿಯರು ಆ ದೇಶದ ಮೂಲನಿವಾಸಿಗಳು.) ಯೆಬೂಸಿಯರು ದಾವೀದನಿಗೆ, “ನೀನು ನಮ್ಮ ನಗರದೊಳಕ್ಕೆ ಬರಲಾಗದು. ಕುರುಡರು ಮತ್ತು ಕುಂಟರು ಸಹ ನಿನ್ನನ್ನು ತಡೆಯಬಲ್ಲರು” ಎಂದು ಹೇಳಿದರು. (ದಾವೀದನು ಅವರ ನಗರದೊಳಕ್ಕೆ ಪ್ರವೇಶಿಸಲು ಸಮರ್ಥನಲ್ಲವೆಂದು ಅವರು ಈ ರೀತಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:6
13 ತಿಳಿವುಗಳ ಹೋಲಿಕೆ  

ಯೆಹೂದ ಕುಲದವರು ಜೆರುಸಲೇಮಿನೊಡನೆ ಯುದ್ಧಮಾಡಿದರು. ಆ ಜನರನ್ನು ಕತ್ತಿಗೆ ತುತ್ತಾಗಿಸಿ ಅವರ ಪಟ್ಟಣವನ್ನು ಸುಟ್ಟುಹಾಕಿದರು.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:


ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.


ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ ದೈವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ.


ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು