Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:9 - ಕನ್ನಡ ಸತ್ಯವೇದವು C.L. Bible (BSI)

9 ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ಆ ಕೋಟೆಗೆ ದಾವೀದನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ ಅದರ ಸುತ್ತಲೂ ವಿುಲ್ಲೋವಿನಿಂದ ಪ್ರಾರಂಭಿಸಿ ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದಾವೀದನು ಕೋಟೆಯಲ್ಲಿ ನೆಲೆಸಿದ್ದನು. ಅವನು ಆ ಕೋಟೆಗೆ “ದಾವೀದನ ನಗರ”ವೆಂದು ಕರೆದನು. ದಾವೀದನು ಮಿಲ್ಲೋವನ್ನು ಕಟ್ಟಿಸಿದನು. ಅವನು ನಗರದಲ್ಲಿ ಅನೇಕ ಕಟ್ಟಡಗಳನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:9
16 ತಿಳಿವುಗಳ ಹೋಲಿಕೆ  

ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.


ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.


ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ಅವನು ದಂಗೆಯೆದ್ದ ವಿವರಣೆ ಹೀಗಿದೆ : ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.


ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”


ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.


ಆ ದಿವಸ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲೆ ಹತ್ತಿ ಹೋಗಿ ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ,” ಎಂದು ಹೇಳಿದನು. ಆದುದರಿಂದಲೇ “ಕುರುಡರೂ ಕುಂಟರೂ ದೇವಾಲಯದೊಳಗೆ ಹೋಗಲಾಗದು,” ಎಂಬ ಹೇಳಿಕೆಯುಂಟು.


ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.


ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.


ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು