Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:12 - ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:12
16 ತಿಳಿವುಗಳ ಹೋಲಿಕೆ  

ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.


ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.


ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.


ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.


ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;


ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲಿತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು