2 ಸಮುಯೇಲ 6:21 - ಕನ್ನಡ ಸತ್ಯವೇದವು C.L. Bible (BSI)21 ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ದಾವೀದನು ಮೀಕಲಳಿಗೆ, “ಇದನ್ನು ಯೆಹೋವನ ಸನ್ನಿಧಿಯಲ್ಲಿ ಮಾಡಿದ್ದೇನಷ್ಟೇ, ನಿನ್ನ ತಂದೆಯನ್ನೂ ಅವರ ಮನೆಯವರೆಲ್ಲರನ್ನೂ ಬಿಟ್ಟು, ನನ್ನನ್ನೇ ಆರಿಸಿಕೊಂಡು, ತನ್ನ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಸಂತೋಷದಿಂದ ಕುಣಿದಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯೆಹೋವನ ಸನ್ನಿಧಿಯಲ್ಲಿಯಷ್ಟೆ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟು ನನ್ನನ್ನೇ ಆರಿಸಿಕೊಂಡು ತನ್ನ ಪ್ರಜೆಗಳಾದ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದ ಯೆಹೋವನ ಮುಂದೆ ಇನ್ನೂ ಕುಣಿದಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ದಾವೀದನು ಮೀಕಲಳಿಗೆ, “ಯೆಹೋವನು ನಿನ್ನ ತಂದೆಯನ್ನಾಗಲಿ ಅವರ ಕುಟುಂಬದ ಇತರ ಯಾರನ್ನೇ ಆಗಲಿ ಆರಿಸಿಕೊಳ್ಳದೆ ನನ್ನನ್ನೇ ಇಸ್ರೇಲರ ನಾಯಕನನ್ನಾಗಿ ಆರಿಸಿಕೊಂಡಿದ್ದಾನೆ. ಆದ್ದರಿಂದಲೇ ನಾನು ಯೆಹೋವನ ಸನ್ನಿಧಿಯಲ್ಲಿ ಕುಣಿದಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.