Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:22 - ಕನ್ನಡ ಸತ್ಯವೇದವು C.L. Bible (BSI)

22 ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರ ಹೊಂದುವುದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದಕ್ಕಿಂತ ಇನ್ನೂ ಹೆಚ್ಚಾಗಿ ತಿರಸ್ಕಾರಹೊಂದುವದಕ್ಕೂ ನನ್ನನ್ನು ಅಲ್ಪನೆಂದು ಭಾವಿಸಿಕೊಳ್ಳುವದಕ್ಕೂ ಸಿದ್ಧನಾಗಿದ್ದೇನೆ. ನೀನು ಹೇಳಿದ ದಾಸಿಯರಾದರೋ ಹೇಗೂ ನನ್ನನ್ನು ಸನ್ಮಾನಿಸುವರು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆತನ ಮುಂದೆ ಇನ್ನೂ ಹೀನವಾಗಿ ಕಾಣಿಸಿಕೊಳ್ಳುವುದಕ್ಕೂ ನನ್ನನ್ನು ನಾನು ಕಡೆಗಣಿಸಿಕೊಳ್ಳುವುದಕ್ಕೂ ಸಿದ್ಧನಿದ್ದೇನೆ. ಬಹುಶಃ ನೀನು ನನ್ನನ್ನು ಗೌರವಿಸದಿರಬಹುದು, ಆದರೆ ನೀನು ಯಾವ ದಾಸಿಯರ ಬಗ್ಗೆ ಮಾತನಾಡಿದೆಯೋ ಅವರು ನನ್ನನ್ನು ಗೌರವಿಸುತ್ತಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:22
16 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.


ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.


ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಪೇತ್ರನು ಹೊರಾಂಗಣದಲ್ಲಿ ಇದ್ದನು. ಆಗ ಪ್ರಧಾನಯಾಜಕನ ಸೇವಕಿಯೊಬ್ಬಳು ಅಲ್ಲಿಗೆ ಬಂದಳು.


ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


ಸೌಲನ ಮಗಳಾದ ಆ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.


ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು