Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:3 - ಕನ್ನಡ ಸತ್ಯವೇದವು C.L. Bible (BSI)

3 ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು, ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಮತ್ತು ಅಹಿಯೋವನೂ ಬಂಡಿಯನ್ನು ಮಾರ್ಗ ತೋರಿಸುತ್ತಾ ಮುನ್ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ದೇವರ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಬಂಡಿಯನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನ ಜನರು ಪವಿತ್ರ ಪೆಟ್ಟಿಗೆಯನ್ನು ಹೊಸಬಂಡಿಯ ಮೇಲಿಟ್ಟರು. ಅವರು ಬೆಟ್ಟದ ಮೇಲಿರುವ ಅಬೀನಾದಾಬನ ಮನೆಯಿಂದ ದೇವರ ಪವಿತ್ರ ಪೆಟ್ಟಿಗೆಯನ್ನು ತಂದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಬಂಡಿಯನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:3
6 ತಿಳಿವುಗಳ ಹೋಲಿಕೆ  

ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.


ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು