Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:8 - ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಉಜ್ಜನನ್ನು ಹತ್ಯಮಾಡಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ “ಪೆರೆಚ್ ಉಜ್ಜಾ” ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಅದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚುಜ್ಜಾ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಉಜ್ಜನನ್ನು ಕೊಂದದ್ದರಿಂದ ದಾವೀದನು ತಳಮಳಗೊಂಡನು. ದಾವೀದನು ಆ ಸ್ಥಳವನ್ನು “ಪೆರೆಚುಜ್ಜಾ” ಎಂದು ಕರೆದನು. ಆ ಸ್ಥಳವನ್ನು ಇಂದಿಗೂ “ಪೆರೆಚುಜ್ಜಾ” ಎಂದೇ ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ, ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:8
6 ತಿಳಿವುಗಳ ಹೋಲಿಕೆ  

ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.


ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು.


ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.


ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.


ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು