Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:9 - ಕನ್ನಡ ಸತ್ಯವೇದವು C.L. Bible (BSI)

9 ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ದಿವಸ ದಾವೀದನು ಯೆಹೋವನಿಗೆ ಭಯಪಟ್ಟು - ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಂದು ದಾವೀದನು ಯೆಹೋವನಿಗೆ ಭಯಪಟ್ಟು, “ದೇವರ ಪವಿತ್ರ ಪೆಟ್ಟಿಗೆಯನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದು ಯೋಚಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:9
12 ತಿಳಿವುಗಳ ಹೋಲಿಕೆ  

ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.


ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ !” ಎಂದು ಕೂಗಿಕೊಂಡೆನು.


ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.


ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.


ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು