Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10-11 ನಾನು ನನ್ನ ಜನರಾದ ಇಸ್ರೇಲರಿಗೆ ಒಂದು ಸ್ಥಳವನ್ನು ಆರಿಸಿಕೊಂಡು ಅವರನ್ನು ನೆಲೆಗೊಳಿಸಿದ್ದೇನೆ. ವಾಸಿಸುವುದಕ್ಕಾಗಿ ಅವರ ಸ್ವಂತ ಸ್ಥಳವನ್ನು ಅವರಿಗೆ ಕೊಟ್ಟಿದ್ದೇನೆ. ಆದ್ದರಿಂದ ಈಗ ಅವರು ಅಲೆದಾಡುವ ಅಗತ್ಯವೇ ಇಲ್ಲ. ಮೊದಲು ನನ್ನ ಜನರಾದ ಇಸ್ರೇಲರನ್ನು ಮುನ್ನಡೆಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದೆನು. ದುಷ್ಟಜನರು ಅವರಿಗೆ ತೊಂದರೆ ಕೊಟ್ಟರು. ಆದರೆ ಅದು ಈಗ ಸಂಭವಿಸುವುದಿಲ್ಲ. ನಿನಗೆ ಶತ್ರು ಭಯವಿಲ್ಲದಂತೆ ಮಾಡುತ್ತೇನೆ; ನಿನ್ನ ಕುಟುಂಬದಿಂದಲೇ ರಾಜರುಗಳನ್ನು ಬರಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:10
25 ತಿಳಿವುಗಳ ಹೋಲಿಕೆ  

ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.


ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.


ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.


ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.


ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”


ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II


ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.


ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು !


ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ,


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


ನನ್ನ ನಾಮಮಹತ್ತು ಈ ದೇವಾಲಯದಲ್ಲು, ಇಸ್ರಯೇಲರ ಊರುಗಳಲ್ಲು ಹಾಗು ನನಗೆ ಪ್ರಿಯವಾಗಿರುವ ಜೆರುಸಲೇಮಿನಲ್ಲು ಸದಾಕಾಲ ಇರುವುದು. ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.


ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.


ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II


ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು