2 ಸಮುಯೇಲ 7:11 - ಕನ್ನಡ ಸತ್ಯವೇದವು C.L. Bible (BSI)11 ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲರಿಗಾಗಿ ನೇಮಿಸಿದ ನ್ಯಾಯಸ್ಥಾಪಕರ ಕಾಲದಿಂದ ಇಲ್ಲಿಯವರೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವುದಿಲ್ಲ. ನೀನು ಶತ್ರುಭಯವಿಲ್ಲದೆ ನೆಮ್ಮದಿಯಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಪೂರ್ವಕಾಲದಲ್ಲೂ ನಾನು ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ನೇವಿುಸಿದ ನ್ಯಾಯಸ್ಥಾಪಕರ ಕಾಲದಿಂದೀಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಕುಗ್ಗಿಸುವದಿಲ್ಲ. ನೀನು ಶತ್ರು ಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಇದಲ್ಲದೆ ಯೆಹೋವನಾದ ನಾನು ನಿನಗೋಸ್ಕರ ಒಂದು ಮನೆಯನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು. ಅಧ್ಯಾಯವನ್ನು ನೋಡಿ |