Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:12 - ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:12
36 ತಿಳಿವುಗಳ ಹೋಲಿಕೆ  

ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;


ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.


ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II


ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.


ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:


ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.


ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು.


ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.


ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.


ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?


ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.


ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.


ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.


ಆದರೂ ಅದನ್ನು ಕಟ್ಟಬೇಕಾದವನು ನೀನಲ್ಲ. ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿಗಾಗಿ ಕಟ್ಟಬೇಕು,’ ಎಂದು ಹೇಳಿದ್ದರು.


ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.


ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು