Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:14 - ಕನ್ನಡ ಸತ್ಯವೇದವು C.L. Bible (BSI)

14 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಅವನಿಗೆ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ಅವನು ತಪ್ಪು ಮಾಡಿದರೆ ತಂದೆ ಮಗನಿಗೆ ಬೆತ್ತದಿಂದ ಶಿಕ್ಷೆಯನ್ನು ಕೊಡುವೆನು ಮತ್ತು ನರಪುತ್ರರಂತೆ ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು; ಅವನು ತಪ್ಪುಮಾಡಿದರೆ ಅವನಿಗೆ ಮನುಷ್ಯಶಿಕ್ಷೆಯನ್ನು ಕೊಡುವೆನು, ನರಪುತ್ರರಂತೆ ಅವನನ್ನು ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಅವನಿಗೆ ತಂದೆಯಾಗಿರುವೆನು; ಅವನು ನನಗೆ ಮಗನಾಗಿರುವನು. ಅವನು ಪಾಪಗಳನ್ನು ಮಾಡಿದರೆ ಇತರ ಜನರ ಮೂಲಕ ನಾನು ಅವನನ್ನು ದಂಡಿಸುವೆನು. ಅವರೇ ನನ್ನ ಚಾವಟಿಗಳಾಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:14
19 ತಿಳಿವುಗಳ ಹೋಲಿಕೆ  

ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,


ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.


ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.


ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು