Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:15 - ಕನ್ನಡ ಸತ್ಯವೇದವು C.L. Bible (BSI)

15 ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟುಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದರೂ ನನ್ನ ಕೃಪೆಯು ಸೌಲನನ್ನು ಬಿಟ್ಟುಹೊದ ಹಾಗೆ ಅವನನ್ನು ಬಿಟ್ಟುಹೋಗುವದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:15
18 ತಿಳಿವುಗಳ ಹೋಲಿಕೆ  

ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II


ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.


ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.


ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II


ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.


ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II


ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ಮೀರಿ ನಡೆದರಾದರೆ ನನ್ನ ಶಾಸನಗಳನು I ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು