Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:18 - ಕನ್ನಡ ಸತ್ಯವೇದವು C.L. Bible (BSI)

18 ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕೂತುಕೊಂಡು - ಕರ್ತನೇ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದೀಯಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ರಾಜನಾದ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತು, “ನನ್ನ ಒಡೆಯನಾದ ಯೆಹೋವನೇ, ನಾನೆಷ್ಟರವನು? ನನ್ನ ಕುಲ ಎಷ್ಟರದು? ನೀನು ನನ್ನನ್ನೇಕೆ ಇಷ್ಟು ಉದ್ಧರಿಸಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:18
15 ತಿಳಿವುಗಳ ಹೋಲಿಕೆ  

ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!


ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.


ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.


ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.


ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.


ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,


ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.


ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು