Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:19 - ಕನ್ನಡ ಸತ್ಯವೇದವು C.L. Bible (BSI)

19 ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕರ್ತನೇ, ಯೆಹೋವನೇ, ಇದು ಸಾಲದೆಂದೆಣಿಸಿ ನಿನ್ನ ಸೇವಕನ ಬಹುದೂರಸಂತಾನದ ವಿಷಯದಲ್ಲಿಯೂ ವಾಗ್ದಾನಮಾಡಿದಿ. ಕರ್ತನೇ, ಯೆಹೋವನೇ, ನೀನು ನರಪ್ರಾಣಿಯನ್ನು ಹೀಗೆ ನಡಿಸಿದ್ದು ಆಶ್ಚರ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಾನು ಕೇವಲ ನಿನ್ನ ಸೇವಕನು. ನೀನು ನನ್ನ ಮೇಲೆ ಬಹಳ ದಯೆ ತೋರಿಸಿರುವೆ. ನನಗೆ ಮಾತ್ರವಲ್ಲದೆ ನೀನು ನನ್ನ ಮುಂದಿನ ಸಂತಾನದ ಬಗ್ಗೆಯೂ ಇದೇ ರೀತಿಯ ದಯಾಪರವಾದ ಮಾತುಗಳನ್ನು ಆಡಿರುವೆ. ನನ್ನ ಒಡೆಯನಾದ ಯೆಹೋವನೇ, ನರಪ್ರಾಣಿಯಾದ ನನ್ನೊಂದಿಗೆ ಇಂಥ ಮಹತ್ತಾದ ಕಾರ್ಯ ಮಾಡಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:19
12 ತಿಳಿವುಗಳ ಹೋಲಿಕೆ  

ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!


ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II


ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಇದಲ್ಲದೆ, ನಾನು ನಿನಗೆ ನಿನ್ನ ಯಜಮಾನನ ಮನೆಯನ್ನೂ ಅವನ ಮಡದಿಯರನ್ನೂ ನಿನ್ನ ಮಡಿಲಿಗೆ ಹಾಕಿದೆ. ಇಸ್ರಯೇಲ್ ಮತ್ತು ಯೆಹೂದ ಕುಲಗಳನ್ನು ನಿನ್ನ ವಶಕ್ಕೆ ಕೊಟ್ಟೆ. ಇದೂ ಸಾಲದಿದ್ದರೆ, ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆ.


ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”


ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.


(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?


ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.


ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು