2 ಸಮುಯೇಲ 7:2 - ಕನ್ನಡ ಸತ್ಯವೇದವು C.L. Bible (BSI)2 ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಒಂದು ದಿವಸ ಪ್ರವಾದಿಯಾದ ನಾತಾನನಿಗೆ - ನೋಡು, ನಾನು ದೇವದಾರುಮರದ ಮನೆಯಲ್ಲಿ ವಾಸವಾಗಿದ್ದೇನೆ; ದೇವರ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ರಾಜನಾದ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದಿಂದ ನಿರ್ಮಿಸಿದ ವೈಭವದ ಮನೆಯಲ್ಲಿ ವಾಸವಾಗಿದ್ದೇನೆ; ಆದರೆ ದೇವರ ಪವಿತ್ರ ಪೆಟ್ಟಿಗೆಯನ್ನು ಇನ್ನೂ ಗುಡಾರದಲ್ಲಿಯೇ ಇಟ್ಟಿದ್ದೇನೆ. ಅದಕ್ಕಾಗಿ ಒಂದು ಆಲಯವನ್ನು ಕಟ್ಟಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು. ಅಧ್ಯಾಯವನ್ನು ನೋಡಿ |
ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.