ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;
ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.
ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.
ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".
ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.