Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:22 - ಕನ್ನಡ ಸತ್ಯವೇದವು C.L. Bible (BSI)

22 ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರೇ, ಯೆಹೋವನೇ! ನೀನೇ ಮಹೋನ್ನತನು. ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ನೀನು ನಮಗೆ ನೀಡಿದ್ದೆಲ್ಲವನ್ನು ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬುದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರೇ, ಯೆಹೋವನೇ, ನೀನೇ ದೊಡ್ಡವನು; ನಿನ್ನ ಸಮಾನರು ಯಾರೂ ಇಲ್ಲ. ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿನ್ನ ಹೊರತು ದೇವರೇ ಇಲ್ಲವೆಂಬದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರಾದ ಯೆಹೋವನೇ, ನಾನು ಕೇಳಿದ ಪ್ರಕಾರ ನೀನೇ ದೊಡ್ಡವನು; ನಿನ್ನ ಸಮಾನರು ಬೇರೆ ಯಾರೂ ಇಲ್ಲ; ನಿನ್ನ ಹೊರತು ಬೇರೆ ದೇವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:22
33 ತಿಳಿವುಗಳ ಹೋಲಿಕೆ  

ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II


ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ಗೊತ್ತೆನಗೆ ನಮ್ಮ ಪ್ರಭು ಘನವಂತನೆಂದು I ಸಕಲ ದೇವರುಗಳಿಗಿಂತಲು ಉನ್ನತನೆಂದು I


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.


ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.


ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.


ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.


ಸರ್ವೇಶ್ವರನಲ್ಲದೆ ಇನ್ನಾವ ದೇವರುಂಟು? ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು