Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:23 - ಕನ್ನಡ ಸತ್ಯವೇದವು C.L. Bible (BSI)

23 ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವದಿರುತ್ತದೆ? ನೀನೇ ಹೋಗಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡು ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ಐಗುಪ್ತ್ಯರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ ರಕ್ಷಿಸಿ ಅದರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನಿನ್ನ ಜನರಾದ ಇಸ್ರೇಲರಂಥವರು ಈ ಲೋಕದಲ್ಲಿ ಬೇರೆ ಯಾರೂ ಇಲ್ಲ, ಅವರು ವಿಶೇಷವಾದ ಜನರು. ಅವರು ಗುಲಾಮರಾಗಿದ್ದರು, ಆದರೆ ಅವರನ್ನು ಈಜಿಪ್ಟಿನಿಂದ ನೀನು ಹೊರತಂದು ಸ್ವತಂತ್ರರನ್ನಾಗಿ ಮಾಡಿರುವೆ. ನೀನು ಅವರನ್ನು ನಿನ್ನ ಜನರನ್ನಾಗಿ ಮಾಡಿಕೊಂಡೆ. ಇಸ್ರೇಲರಿಗಾಗಿ ನೀನು ಉತ್ತಮವಾದ ಮತ್ತು ಮಹತ್ತಾದ ಕಾರ್ಯಗಳನ್ನು ಮಾಡಿದೆ. ನಿನ್ನ ದೇಶಕ್ಕಾಗಿ ನೀನು ಮಹತ್ಕಾರ್ಯಗಳನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:23
36 ತಿಳಿವುಗಳ ಹೋಲಿಕೆ  

ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II


ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II


ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II


ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II


ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.


ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II


ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”


ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.


ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.


ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು. ಆಗ ನೀನು ಈವರೆಗೆ ಭೂಮಿಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದೆ.


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು