Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:25 - ಕನ್ನಡ ಸತ್ಯವೇದವು C.L. Bible (BSI)

25 “ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರೇ, ಯೆಹೋವನೇ! ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನು ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೇವರೇ, ಯೆಹೋವನೇ, ನೀನು ನಿನ್ನ ಸೇವಕನನ್ನೂ ಅವನ ಮನೆಯನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸು. ಅದು ಸದಾ ಸ್ಥಿರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ದೇವರಾದ ಯೆಹೋವನೇ, ಈಗ ನೀನು ನನ್ನ ಬಗ್ಗೆ ಮಾತನಾಡಿರುವೆ. ನಾನು ನಿನ್ನ ಸೇವಕ. ನೀನು ನನ್ನ ಕುಲದ ಬಗ್ಗೆಯೂ ವಾಗ್ದಾನ ಮಾಡಿರುವೆ. ನಿನ್ನ ವಾಗ್ದಾನಗಳನ್ನು ನೆರವೇರಿಸು. ನೀನು ವಾಗ್ದಾನ ಮಾಡಿದ ಕಾರ್ಯಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಈಗ ದೇವರಾದ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:25
11 ತಿಳಿವುಗಳ ಹೋಲಿಕೆ  

ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”


ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!


‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II


ಗಂಡನಾದ ಎಲ್ಕಾನನು, “ಹಾಗೆಯೇ ಆಗಲಿ; ನಿನಗೆ ಸರಿತೋರಿದಂತೆ ಮಾಡು. ಮಗು ಮೊಲೆಬಿಡುವವರೆಗೆ ಮನೆಯಲ್ಲೇ ಇರು. ಸರ್ವೇಶ್ವರ ನಿನ್ನ ಮಾತನ್ನು ದೃಢವಾಗಿಸಲಿ,” ಎಂದನು. ಮಗು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಆರೈಕೆ ಮಾಡಿದಳು.


ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು