Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನ ವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಇಸ್ರಾಯೇಲ್ಯರನ್ನು ಐಗುಪ್ತ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೂ ಮನೆಯಲ್ಲಿ ವಾಸಮಾಡಲಿಲ್ಲ. ಗುಡಾರದಲ್ಲೇ ವಾಸಿಸುತ್ತಾ [ಅವರೊಡನೆ] ಸಂಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈಜಿಪ್ಟಿನಿಂದ ಇಸ್ರೇಲರನ್ನು ಹೊರತಂದ ಸಮಯದಲ್ಲಿ ನಾನು ಆಲಯದಲ್ಲಿ ವಾಸಮಾಡಲಿಲ್ಲ. ನಾನು ಗುಡಾರದಲ್ಲಿ ವಾಸಮಾಡುತ್ತಾ ಸಂಚರಿಸಿದೆನು. ಗುಡಾರವೇ ನನ್ನ ಆಲಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:6
15 ತಿಳಿವುಗಳ ಹೋಲಿಕೆ  

‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.


ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.


ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.


ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.


ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು