7 ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”
7 ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.
7 ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲ್ಯರನ್ನು ಪಾಲಿಸುವದಕ್ಕೋಸ್ಕರ ನನ್ನಿಂದ ನೇವಿುಸಲ್ಪಟ್ಟ ಯಾವ ಕುಲದವರನ್ನಾದರೂ - ನೀವು ನನಗೋಸ್ಕರ ದೇವದಾರುಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳು.
7 ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’
ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”
ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.
“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.
ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.
‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.
ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.
ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”
ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.
ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?