Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:1 - ಕನ್ನಡ ಸತ್ಯವೇದವು C.L. Bible (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಬಿದ್ದು ಅವರನ್ನು ಸೋಲಿಸಿ ಅವರ ರಾಜಧಾನಿಯನ್ನು ತೆಗೆದುಕೊಂಡು ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ, ದಾವೀದನು ಫಿಲಿಷ್ಟಿಯರನ್ನು ಸೋಲಿಸಿ ಬಹುವಿಸ್ತಾರವಾದ ಪ್ರದೇಶವನ್ನು ಹತೋಟಿಯಲ್ಲಿಟ್ಟುಕೊಂಡಿದ್ದ ಅವರ ರಾಜಧಾನಿಯನ್ನು ಸ್ವಾಧೀನಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:1
14 ತಿಳಿವುಗಳ ಹೋಲಿಕೆ  

ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ‘ಅಮ್ಮಾ’ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮವಾಯಿತು. ಆ ಗುಡ್ಡ ಗಿಬ್ಯೋನ್ ಮರುಭೂಮಿ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿದೆ.


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.


ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.


ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.


ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II


ಮೋವಾಬ್ ಪ್ರಾಂತ್ಯವು ನನ್ನ ಸ್ನಾನ ಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು!” II


ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.


ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.


ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.


ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು