Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:11 - ಕನ್ನಡ ಸತ್ಯವೇದವು C.L. Bible (BSI)

11 ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಸನಾದ ದಾವೀದನು ಇವುಗಳನ್ನೂ ತನ್ನಿಂದ ಅಪಜಯಹೊಂದಿದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬೀ ಸುತ್ತಣ ಜನಾಂಗಗಳಿಂದಲೂ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾವೀದನು ಆ ವಸ್ತುಗಳನ್ನು ತೆಗೆದುಕೊಂಡು ಯೆಹೋವನಿಗೆ ಸಮರ್ಪಿಸಿದನು. ಅವನು ಅನ್ಯದೇಶಗಳನ್ನು ಸೋಲಿಸಿದ್ದಾಗ ಯೆಹೋವನಿಗೆ ಸಮರ್ಪಿಸಿದ್ದ ಬೆಳ್ಳಿ ಮತ್ತು ಚಿನ್ನಗಳೊಂದಿಗೆ ಇವುಗಳನ್ನೂ ಸೇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:11
8 ತಿಳಿವುಗಳ ಹೋಲಿಕೆ  

ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು