Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:12 - ಕನ್ನಡ ಸತ್ಯವೇದವು C.L. Bible (BSI)

12 ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಡಕೊಂಡ ಬೆಳ್ಳಿಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆತನು ಸೋಲಿಸಿದ ದೇಶಗಳು ಯಾವುವೆಂದರೆ: ಅರಾಮ್, ಮೋವಾಬ್, ಅಮ್ಮೋನಿಯ, ಫಿಲಿಷ್ಟಿಯ ಮತ್ತು ಅಮಾಲೇಕ್ಯ. ಚೋಬದ ರಾಜನಾದ ರೆಹೋಬನ ಮಗ ಹದದೆಜೆರನನ್ನು ಸಹ ದಾವೀದನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:12
10 ತಿಳಿವುಗಳ ಹೋಲಿಕೆ  

ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.


ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.


ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.


“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.


ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.


ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.


ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.


ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು