Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:14 - ಕನ್ನಡ ಸತ್ಯವೇದವು C.L. Bible (BSI)

14 ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ಎದೋವಿುನಲ್ಲೆಲ್ಲಾ ಕಾವಲುದಂಡುಗಳನ್ನಿರಿಸಿದನು; ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದಾವೀದನು ಎದೋಮಿನ ಎಲ್ಲಾ ಕಡೆಯಲ್ಲೂ ಕಾವಲುದಂಡನ್ನು ಇರಿಸಿದನು. ಎದೋಮಿನ ಜನರೆಲ್ಲರೂ ದಾವೀದನ ಸೇವಕರಾದರು. ದಾವೀದನು ಹೋದ ಕಡೆಗಳಲ್ಲೆಲ್ಲಾ ಯೆಹೋವನು ಜಯವನ್ನು ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:14
18 ತಿಳಿವುಗಳ ಹೋಲಿಕೆ  

ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.


ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.


ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.


ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.


ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.


ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.


ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.


ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.


ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು