Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:18 - ಕನ್ನಡ ಸತ್ಯವೇದವು C.L. Bible (BSI)

18 ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಸೆರಾಯನು ಲೇಖಕನು. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರು ಮತ್ತು ಪೆಲೇತ್ಯರು ಎಂಬ ಕಾವಲು ದಂಡುಗಳ ಅಧಿಪತಿಯಾಗಿದ್ದನು. ದಾವೀದನ ಮಕ್ಕಳೆಲ್ಲರೂ ಮುಖ್ಯಾಧಿಕಾರಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:18
18 ತಿಳಿವುಗಳ ಹೋಲಿಕೆ  

ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.


ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.


ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


ಆಗ ಅವನು ಯೋವಾಬನ ಸೈನಿಕರನ್ನೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಜೆರುಸಲೇಮಿನಿಂದ ಹೊರಟನು.


ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.


ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.


ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.


ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;


ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು;


ಯಾಯೀರಿನವನಾದ ಈರನೂ ದಾವೀದನ ಯಾಜಕನು.


ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.


ಅಂತೆಯೇ ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದನು. ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.


ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು