Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:3 - ಕನ್ನಡ ಸತ್ಯವೇದವು C.L. Bible (BSI)

3 ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನು ಯೂಫ್ರೇಟೀಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹದದೆಜೆರನು ರೆಹೋಬನ ಮಗ ಹಾಗೂ ಚೋಬದ ರಾಜ. ದಾವೀದನು ಯೂಫ್ರೇಟೀಸ್ ನದಿಯ ಸುತ್ತಲಿನ ಪ್ರದೇಶವನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದಾಗ, ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:3
15 ತಿಳಿವುಗಳ ಹೋಲಿಕೆ  

ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.


ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.


ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.


ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.


ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II


ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.


ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.


ಚೋಬ ಊರಿನ ನಾತಾನ್ ಎಂಬವನ ಮಗ ಇಗಾಲ್, ಗಾದ್ಯನಾದ ಬಾನೀ,


ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು