Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 8:8 - ಕನ್ನಡ ಸತ್ಯವೇದವು C.L. Bible (BSI)

8 ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹದದೆಜೆರನಿಗೆ ಸೇರಿದ ನಗರಗಳಾದ ಬೆಟಹ ಮತ್ತು ಬೇರೋತೈಗಳಿಂದ ಹಿತ್ತಾಳೆಯ ಅನೇಕಾನೇಕ ವಸ್ತುಗಳನ್ನು ದಾವೀದನು ವಶಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 8:8
9 ತಿಳಿವುಗಳ ಹೋಲಿಕೆ  

ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.


ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.


170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.


ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.


ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.


ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಜೆರುಸಲೇಮಿಗೆ ಒಯ್ದನು.


ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.


ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು