Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:1 - ಕನ್ನಡ ಸತ್ಯವೇದವು C.L. Bible (BSI)

1 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಒಂದು ದಿವಸ] ದಾವೀದನು - ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿರುತ್ತಾರೋ? ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು, “ಸೌಲನ ಕುಟುಂಬದಲ್ಲಿ ಇನ್ನೂ ಯಾರಾದರೂ ಉಳಿದಿರುವರೇ? ಯೋನಾತಾನನಿಗೋಸ್ಕರ ನಾನು ಆ ವ್ಯಕ್ತಿಗೆ ದಯೆ ತೋರಿಸಬೇಕಾಗಿದೆ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:1
15 ತಿಳಿವುಗಳ ಹೋಲಿಕೆ  

ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.


ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!


ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.


ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು