Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:11 - ಕನ್ನಡ ಸತ್ಯವೇದವು C.L. Bible (BSI)

11 ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೀಬನು ಅರಸನಿಗೆ, “ಒಡೆಯನಾದ ಅರಸನ ಅಪ್ಪಣೆಯಂತೆ ನಿನ್ನ ಸೇವಕನು ನಡೆಯುವನು” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚೀಬನು ಅರಸನಿಗೆ - ಒಡೆಯನಾದ ಅರಸನ ಅಪ್ಪಣೆಯಂತೆ ಸೇವಕನು ನಡೆಯುವನು ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುವವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಚೀಬನು ರಾಜನಾದ ದಾವೀದನಿಗೆ, “ನಾನು ನಿನ್ನ ಸೇವಕ. ರಾಜನಾದ ಒಡೆಯನು ನನಗೆ ಆಜ್ಞಾಪಿಸಿದ್ದೆಲ್ಲವನ್ನೂ ನಾನು ಮಾಡುತ್ತೇನೆ” ಎಂದನು. ಆದ್ದರಿಂದ ಮೆಫೀಬೋಶೆತನು, ರಾಜನ ಗಂಡುಮಕ್ಕಳಲ್ಲಿ ಒಬ್ಬನಂತೆ, ದಾವೀದನ ಪಂಕ್ತಿಯಲ್ಲಿ ಊಟ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:11
8 ತಿಳಿವುಗಳ ಹೋಲಿಕೆ  

ಅವನು, “ಒಡೆಯರೇ, ಅರಸರೇ, ನನ್ನ ಸೇವಕ ನನ್ನನ್ನು ವಂಚಿಸಿದ. ಕುಂಟನಾದ ನಾನು ಅವನಿಗೆ, ‘ಕತ್ತೆಗೆ ತಡಿಹಾಕು, ನಾನು ಕುಳಿತುಕೊಂಡು ಅರಸರ ಜೊತೆಯಲ್ಲೇ ಹೋಗಬೇಕು’ ಎಂದು ಆಜ್ಞಾಪಿಸಿದೆ.


ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;


ನೀನೂ ನಿನ್ನ ಮಕ್ಕಳೂ ಆಳುಗಳೂ ನಿನ್ನ ಯಜಮಾನನ ಮೊಮ್ಮಗನಿಗಾಗಿ ಆ ಭೂಮಿಯನ್ನು ವ್ಯವಸಾಯಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲೇ ಭೋಜನವಾಗುವುದು,” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಆಳುಗಳೂ ಇದ್ದರು.


ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.


ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.


ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.


ಸೇವಕರು ಅರಸನಿಗೆ, “ನಮ್ಮ ಒಡೆಯರಾದ ಅರಸರಿಗೆ ಸರಿತೋಚಿದ್ದನ್ನೇ ಮಾಡಲು ಸಿದ್ಧರಾಗಿದ್ದೇವೆ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು