Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಮಾಜ್ಯಾ ಪ್ರಿತಿಚ್ಯಾ ದೊಸ್ತಾ, ತಿಯಾ ಅಸೆ ಕರಿ ನಸ್ತಾನಾ ಬರ್‍ಯಾ ವಾಟೆನ್ ಚಲ್, ಬರ್ಯಾ ವಾಟೆನ್ ಚಲ್ತಲೊ ದೆವಾಚೊ , ಕೊನ್ ವಾಯ್ಟ್ ಕರ್ತಾ ತೆನಿ ದೆವಾಕ್ ಬಗಟ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:11
22 ತಿಳಿವುಗಳ ಹೋಲಿಕೆ  

ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II


ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.


ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.


ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.


ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.


ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.


ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು