Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:12 - ಕನ್ನಡ ಸತ್ಯವೇದವು C.L. Bible (BSI)

12 ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇಮೇತ್ರಿಯನು ಎಲ್ಲರಿಂದಲೂ, ಒಳ್ಳೆಯವನೆಂದು ಗುರುತಿಸಲ್ಪಟ್ಟಿದ್ದಾನೆ. ಅಲ್ಲದೆ ಸಾಕ್ಷಿಹೊಂದಿದವನಾಗಿದ್ದಾನೆ. ಅಷ್ಟೇ ಅಲ್ಲದೆ ನಾವು ಅವನ ಪರವಾಗಿ ಸಾಕ್ಷಿಕೊಡುತ್ತದೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲವನಾಗಿದ್ದೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ದೆಮೆತ್ರಿ ಮನ್ತಲ್ಯಾ ಮಾನ್ಸಾಚ್ಯಾ ವಿಶಯಾತ್ ಬರೆ ಬೊಲ್ತ್ಯಾತ್, ಅನಿ ತೊ ಅಪ್ನಿಚ್ ಸಾಕ್ಷಿ ದಿತಾ, ಅನಿ ಅಮಿಬಿ ಸಾಕ್ಷಿ ದಿತಾಂವ್ ಅನಿ ಅಮಿ ಸಾಂಗ್ತಲೆ ಖರೆ ತೆಚ್ಯಾ ವಾಂಗ್ಡಾ ಮಿಳ್ವುತಾಂವ್. ಅಮಿ ಸಾಂಗ್ತಲೆ ಖರೆ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:12
8 ತಿಳಿವುಗಳ ಹೋಲಿಕೆ  

ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.


ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು