Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಪ್ರಿಯನೇ, ನೀನು ಆತ್ಮ ವಿಷಯದಲ್ಲಿ ಅಭಿವೃದ್ಧಿಹೊಂದಿರುವ ಪ್ರಕಾರ ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ ಸುಕ್ಷೇಮವಾಗಿರಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಾಜ್ಯಾ ಪ್ರಿತಿಚ್ಯಾ ದೊಸ್ತಾ ತುಜೆ ಸಗ್ಳೆ ಬರೆ ಹೊಂವ್ದಿತ್ ಅನಿ ತುಜೆ ಆರೊಗ್ಯ್ ಬರೆ ರ್‍ಹಾಂವ್ದಿತ್ ತಿಯಾ ಆತ್ಮಿಕ್ ರಿತಿನ್ ಬರೆ ಹಾಸ್ ಮನುನ್ ಮಿಯಾ ಮಾಗ್ನಿ ಕರ್ತಾ, ತಸೆಚ್ ತಿಯಾ ಆರಾಮ್ ರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:2
19 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.


ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.


ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.


ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು