Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




3 ಯೋಹಾನನು 1:3 - ಕನ್ನಡ ಸತ್ಯವೇದವು C.L. Bible (BSI)

3 ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು ನಿನ್ನಲ್ಲಿರುವ ಸತ್ಯವನ್ನು ಕುರಿತು ತಿಳಿಸಿ ನೀನು ಸತ್ಯವಂತನಾಗಿ ನಡೆಯುವವನು ಎಂದು ಹೇಳುವಾಗ ನಾನು ಬಹಳ ಸಂತೋಷಪಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತುಜ್ಯಾ ಜಿವನಾತ್ಲಿ ಖರೆಪಾನ್ ಅನಿ ತಿಯಾ ಖರ್ಯಾ ವಾಟೆನ್ ಚಲುಲಾಗ್ಲೆಯ್ ಮನುನ್ ಕ್ರಿಸ್ತಾಕ್ಡೆ ಭಾವ್ ಹೊವ್ನ್ ಹೊತ್ತ್ಯಾ ತಾಂಡ್ಯಾಚ್ಯಾ ಲೊಕಾನಿ ಯೆವ್ನ್ ಮಾಕಾ ಸಾಕ್ಷಿ ದಿಲ್ಯಾನಿ ಹೆಚ್ಯಾ ವೈನಾ ಖುಶಿ ಹೊಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




3 ಯೋಹಾನನು 1:3
17 ತಿಳಿವುಗಳ ಹೋಲಿಕೆ  

ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.


ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.


ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.


ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು